Luke 14:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
Kannada BSI Bible 2016
ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ - ಈಗ ಸಿದ್ಧವಾಗಿದೆ, ಬರಬೇಕು ಎಂದು ಕರೆಯುವದಕ್ಕೆ ತನ್ನ ಆಳನ್ನು ಕಳುಹಿಸಿದನು.
Kannada Bible (KNCL) BSI 2016
ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.