Luke 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
Kannada BSI Bible 2016
ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.
Kannada Bible (KNCL) BSI 2016
ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.