Luke 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
Kannada BSI Bible 2016
ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನು - ನಾನು ಐದು ಜೋಡಿ ಎತ್ತುಗಳನ್ನು ತಕ್ಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕೆ ಹೋಗುತ್ತೇನೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.
Kannada Bible (KNCL) BSI 2016
ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.