Luke 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
Kannada BSI Bible 2016
ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.
Kannada Bible (KNCL) BSI 2016
“ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.