Luke 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
Kannada BSI Bible 2016
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.
Kannada Bible (KNCL) BSI 2016
ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.