Luke 14:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
Kannada BSI Bible 2016
ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನಾದರೂ ಒಂದು ಬುರುಜನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂತುಕೊಂಡು - ಅದಕ್ಕೆ ಎಷ್ಟು ಖರ್ಚು ಹಿಡಿದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಉಂಟೋ ಎಂದು ಲೆಕ್ಕಮಾಡುವದಿಲ್ಲವೇ?
Kannada Bible (KNCL) BSI 2016
ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?