Luke 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
Kannada BSI Bible 2016
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂತುಕೊಂಡು ಆಲೋಚಿಸುವದಿಲ್ಲವೇ?
Kannada Bible (KNCL) BSI 2016
ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?