Luke 14:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
Kannada BSI Bible 2016
ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್‍ದಿನದಲ್ಲಾದರೂ ಮೇಲಕ್ಕೆ ತೆಗೆಯುವದಿಲ್ಲವೇ ಎಂದು ಅವರನ್ನು ಕೇಳಿದನು.
Kannada Bible (KNCL) BSI 2016
ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.