Luke 15:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.
Kannada BSI Bible 2016
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.
Kannada Bible (KNCL) BSI 2016
ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.