Luke 15:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.
Kannada BSI Bible 2016
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.
Kannada Bible (KNCL) BSI 2016
ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!