Luke 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.
Kannada BSI Bible 2016
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.
Kannada Bible (KNCL) BSI 2016
ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.