Luke 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
Kannada BSI Bible 2016
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು
Kannada Bible (KNCL) BSI 2016
ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.