Luke 15:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
Kannada BSI Bible 2016
ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;
Kannada Bible (KNCL) BSI 2016
ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.