Luke 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
Kannada BSI Bible 2016
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.
Kannada Bible (KNCL) BSI 2016
ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.