Luke 15:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.
Kannada BSI Bible 2016
ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಅವನಿಗೆ ಸಿಟ್ಟುಬಂದು ಒಳಕ್ಕೆ ಹೋಗಲೊಲ್ಲದೆ ಇದ್ದನು. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.
Kannada Bible (KNCL) BSI 2016
“ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.