Luke 15:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.
Kannada BSI Bible 2016
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.
Kannada Bible (KNCL) BSI 2016
ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.