Luke 15:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.