Luke 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.
Kannada BSI Bible 2016
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.
Kannada Bible (KNCL) BSI 2016
ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”