Luke 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
Kannada BSI Bible 2016
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ - ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದು ಹೋದರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೇ?
Kannada Bible (KNCL) BSI 2016
“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ?