Luke 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ‘ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು’ ಎಂದು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
Kannada BSI Bible 2016
ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ.
Kannada Bible (KNCL) BSI 2016
ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’