Luke 15:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.