Luke 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
Kannada BSI Bible 2016
ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು?
Kannada Bible (KNCL) BSI 2016
“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?