Luke 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ‘ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು’ ಎಂದು ಹೇಳುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
Kannada BSI Bible 2016
ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ.
Kannada Bible (KNCL) BSI 2016
ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಅದನ್ನು ಕಂಡುಕೊಂಡ ಮೇಲೆ, ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ಅವರಿಗೆ, ‘ಕಳೆದುಹೋದ ನಾಣ್ಯವು ಸಿಕ್ಕಿತು; ನನ್ನ ಸಂಗಡ ಸಂತೋಷಪಡಿರಿ,’ ಎನ್ನುವಳು.