Luke 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
Kannada BSI Bible 2016
ತರುವಾಯ ಆತನು ತನ್ನ ಶಿಷ್ಯರಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.