Luke 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
Kannada BSI Bible 2016
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.
Kannada Bible (KNCL) BSI 2016
“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.