Luke 16:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಫರಿಸಾಯರಿಗೆ ಹೀಗೆಂದನು, "ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
Kannada BSI Bible 2016
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
Kannada Bible (KNCL) BSI 2016
ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.