Luke 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
"ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Kannada BSI Bible 2016
ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Kannada Bible (KNCL) BSI 2016
ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”