Luke 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
Kannada BSI Bible 2016
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.
Kannada Bible (KNCL) BSI 2016
“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.