Luke 16:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ‘ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
Kannada BSI Bible 2016
ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.