Luke 16:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
Kannada BSI Bible 2016
ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಮೈತುಂಬಾ ಹುಣ್ಣೆದ್ದವನು; ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುವವು.
Kannada Bible (KNCL) BSI 2016
ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.