Luke 16:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
Kannada BSI Bible 2016
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.
Kannada Bible (KNCL) BSI 2016
‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.