Luke 16:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
Kannada BSI Bible 2016
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು.
Kannada Bible (KNCL) BSI 2016
ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.