Luke 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
Kannada BSI Bible 2016
ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.
Kannada Bible (KNCL) BSI 2016
ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.