Luke 16:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
Kannada BSI Bible 2016
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”