Luke 16:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
Kannada BSI Bible 2016
ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು
Kannada Bible (KNCL) BSI 2016
ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.