Luke 16:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಮೊದಲನೆಯ ವ್ಯಕ್ತಿ, ‘ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
Kannada BSI Bible 2016
ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನೂರು ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು.
Kannada Bible (KNCL) BSI 2016
ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.