Luke 16:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI Bible 2016
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.