Luke 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
Kannada BSI Bible 2016
ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ.