Luke 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
Kannada BSI Bible 2016
ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.
Kannada Bible (KNCL) BSI 2016
ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.