Luke 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
Kannada BSI Bible 2016
ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.
Kannada Bible (KNCL) BSI 2016
ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.