Luke 17:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
Kannada BSI Bible 2016
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವಂಥದಲ್ಲ.
Kannada Bible (KNCL) BSI 2016
ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,