Luke 17:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇಗೋ, ದೇವರ ರಾಜ್ಯವು ಇಲ್ಲಿದೆ’! ‘ಅಗೋ ಅಲ್ಲಿದೆ’! ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
Kannada BSI Bible 2016
ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ ಎಂದು ಹೇಳುವದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಅಂತ ತಿಳುಕೊಳ್ಳಿರಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ, ” ಎಂದರು.