Luke 17:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
Kannada BSI Bible 2016
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.
Kannada Bible (KNCL) BSI 2016
ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.