Luke 17:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
Kannada BSI Bible 2016
ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
Kannada Bible (KNCL) BSI 2016
ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.