Luke 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
Kannada BSI Bible 2016
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷವಿುಸಿಬಿಡು.
Kannada Bible (KNCL) BSI 2016
ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.