Luke 17:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
Kannada BSI Bible 2016
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರಿಗಿ ಹಿಂದಕ್ಕೆ ಹೋಗಬಾರದು.
Kannada Bible (KNCL) BSI 2016
“ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.