Luke 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
Kannada BSI Bible 2016
ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು - ನನಗೆ ಪಶ್ಚಾತ್ತಾಪವಾಯಿತು ಎಂದು ಹೇಳಿದರೆ ಅವನಿಗೆ ಕ್ಷವಿುಸು ಎಂದು ಹೇಳಿದನು.
Kannada Bible (KNCL) BSI 2016
ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.