Luke 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
Kannada BSI Bible 2016
ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನಿಗಾದರೂ ಉಳುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳಾನೇ?
Kannada Bible (KNCL) BSI 2016
“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?