Luke 17:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
Kannada BSI Bible 2016
ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಹೇಳದೆ - ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡಿ ಕುಡಿಯುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು; ಆಮೇಲೆ ನೀನು ಊಟಮಾಡಿ ಕುಡಿ ಎಂದು ಹೇಳುವನಲ್ಲವೇ.
Kannada Bible (KNCL) BSI 2016
ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?