Luke 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
Kannada BSI Bible 2016
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.
Kannada Bible (KNCL) BSI 2016
ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.